ಮೂಡುಬಿದಿರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲೆ, ಪದಾಧಿಕಾರಿಗಳ ಮತ್ತು ಕಾರ್ಯಕರಿಣಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಮೂಡುಬಿದಿರೆ ಪ್ರೆಸ್‌ಕ್ಲಬ್ ಉಪಾಧ್ಯಕ್ಷ, ಹೊಸದಿಗಂತ ವರದಿಗಾರರಾದ ಹರೀಶ್ ಕೆ.ಅದೂರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ವಾರ್ತಾ ಇಲಾಖೆಯಲ್ಲಿ ನಡೆದ ಚುನಾವಣೆಯಲ್ಲಿ ಅವರು 152 ಮತಗಳನ್ನು ಗಳಿಸಿ ಗೆದ್ದಿದ್ದಾರೆ.

