ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಪ್ರಿಯ ನಾಯಕ ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಶ್ರೀನಾಥ್ ಸುವರ್ಣ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಮೂಲಗಳ ಪ್ರಕಾರ, ಶ್ರೀನಾಥ್ ಸುವರ್ಣ ಅವರು ಸ್ಮಶಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ದಿಢೀರ್ ದುರಂತದಿಂದಾಗಿ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಮೂಡುಬಿದಿರೆ ಪರಿಸರದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.
ವ್ಯವಹಾರ ನಷ್ಟವೇ ಕಾರಣ?
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಶ್ರೀನಾಥ್ ಸುವರ್ಣ ಅವರು ಇತ್ತೀಚೆಗೆ ವ್ಯವಹಾರದಲ್ಲಿ ನಷ್ಟದಿಂದ ತೀವ್ರವಾಗಿ ಬಳಲುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಶ್ರೀನಾಥ್ ಸುವರ್ಣ ಅವರು ಗ್ರಾ.ಪಂ. ಅಧ್ಯಕ್ಷರಾಗಿ ಮಾಡಿದ ಕೆಲಸಗಳಿಂದಾಗಿ ಜನಪ್ರಿಯರಾಗಿದ್ದರು. ಅವರ ನಿಧನಕ್ಕೆ ಸ್ಥಳೀಯ ರಾಜಕೀಯ ಮುಖಂಡರು ಹಾಗೂ ಗ್ರಾಮಸ್ಥರು ಆಘಾತ ವ್ಯಕ್ತಪಡಿಸಿದ್ದಾರೆ.
ಮೃತರು ತಾಯಿ ಮತ್ತು ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

