ಮೂಡುಬಿದಿರೆ: ಪ್ರತಿಯೊಬ್ಬರ ಜೀವನದಲ್ಲಿ ವಿವಿಧ ಹಂತಗಳಲ್ಲಿ ಕಾನೂನು ವಿಚಾರದ ಸಮಸ್ಯೆಗಳು ಕಂಡುಬರುತ್ತವೆ. ಸೂಕ್ತ ರೀತಿಯಲ್ಲಿ ಕಾನೂನು ಅರಿವು ಇಲ್ಲದಿರುವುದನ್ನು ಜನರು ಮತ್ತಷ್ಟು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ವಕೀಲರು ಹಾಗೂ ಕಾನೂನು ಕಲಿಯುವ ವಿದ್ಯಾರ್ಥಿಗಳು ಸಕಾಲದಲ್ಲಿ ಜನಸಾಮಾನ್ಯರಲ್ಲಿ ಕಾನೂನಿನ ಸರಿಯಾದ ಅರಿವುದು ಮೂಡಿಸುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಧುಕರ್ ಭಾಗವತ್ ಹೇಳಿದರು.
ಮೂಡುಬಿದಿರೆ ನ್ಯಾಯಾಲಯ ಮತ್ತು ವಕೀಲರ ಸಂಘದದ ಜಂಟಿ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನದಲ್ಲಿ ನಡೆದ ಕಾನೂನು ನೆರವು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಕಳದ ಹಿರಿಯ ವಕೀಲ ಎಚ್. ಶೇಖರ್ ಮಡಿವಾಳ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕರ್ನಾಟಕ ಭೂಕಂದಾಯ ಕಾಯೆ ಮತ್ತು ಭೂ ಮಸೂದೆ ಕಾಯ್ದೆ ಕುರಿತು ಮಾತನಾಡಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮಾಜಿ ಸದಸ್ಯ, ಮೂಡುಬಿದಿರೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅಧ್ಯಕ್ಷತೆವಹಿಸಿದರು.
ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಝೈಬುನೀಸಾ, ಮೂಡುಬಿದಿರೆ ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶೆ ಕಾವೇರಮ್ಮ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ಉಪಾಧ್ಯಕ್ಷ ಮನೋಜ್ ಶೆಣೈ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ, ಭುವನ್ ಜ್ಯೋತಿ ಟ್ರಸ್ಟ್ನ ಕಾರ್ಯದರ್ಶಿ ಆರ್. ಪ್ರಶಂತ್ ಡಿಸೋಜ, ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಮಹತೇಶ್ ಉಪಸ್ಥಿತರಿದ್ದರು.
ಹಿರಿಯ ವಕೀಲ ಎಂ.ಎಸ್ ತಂತ್ರಿ ಸ್ವಾಗತಿಸಿದರು. ಜಯಪ್ರಕಾಶ್ ಭಂಡಾರಿ ನಿರೂಪಿಸಿ, ವಂದಿಸಿದರು.
ವಕೀಲರು, ಭುವನಜ್ಯೋತಿ ಹಾಗೂ ಆಳ್ವಾಸ್ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


