ರಾಜ್ಯ ಮಟ್ಟದ ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್‌ಗೆ 20ನೇ ಬಾರಿ ಅವಳಿ ಸಮಗ್ರ ಪ್ರಶಸ್ತಿ

BIDIRE NEWS

ಮೂಡುಬಿದಿರೆ: ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.

ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿಯನ್ನು 20ನೇ ಬಾರಿಗೆ ತನ್ನದಾಗಿಸಿಕೊಂಡಿತು. 

ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.