ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಪ್ರಾಂತದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಿಸೆಂಬರ್ 5, ಬೆಳಿಗ್ಗೆ 10:00 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.ಇದರೊಂದಿಗೆ ಸಮನ್ವಯ ಶಿಕ್ಷಣ ಚಟುವಟಿಕೆಯಡಿಯಲ್ಲಿ 'ಪರಿಸರ ನಿರ್ಮಾಣ' ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಲ್ಲಾ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಮತ್ತು ಅಂಗನವಾಡಿ ಶಿಕ್ಷಕರು ಭಾಗವಹಿಸಲಿರುವರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಅಭಿಯಂತರೆ
ಶಿಲ್ಪಾ ಎಸ್., ವೈದ್ಯಾಧಿಕಾರಿ ಡಾ.ಅಕ್ಷತಾ, ಕ್ಷೇತ್ರ ಶಿಕ್ಷಣಾಧಿಕಾರಿವಿರೂಪಾಕ್ಷಪ್ಪ ಹೆಚ್.ಎಸ್., ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯಾ ಎನ್., ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ಪುತ್ತೂರು ತನುಜಾ ಎಂ., ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ಸೀತಮ್ಮ, ಪ್ರಾಂತ್ಯ ಶಾಲೆಯ ಮುಖ್ಯ ಶಿಕ್ಷಕ ರಾಮಚಂದ್ರ, ಲಯನ್ಸ್ ಕ್ಲಬ್ ಅಲಂಗಾರು ,ಪವರ್ ಫ್ರೆಂಡ್ಸ್ ಬೆದ್ರ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಲಿದ್ದಾರೆ.

