ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡಕ್ಕೆ ಮೂರನೇ ಬಾರಿ ಚಾಂಪಿಯನ್ ಪಟ್ಟ

BIDIRE NEWS

ಮೂಡುಬಿದಿರೆ: ರಾಜಸ್ಥಾನದಲ್ಲಿ ನವೆಂಬರ್ 24 ರಿಂದ ಡಿಸೆಂಬರ್ 5 ರವರೆಗೆ ನಡೆದ 'ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಗೇಮ್ಸ್'ನಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಸತತ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಮೂರು ಚಿನ್ನ ಮತ್ತು ಒಂದು ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಮಹತ್ವದ ಸಾಧನೆಯನ್ನು ಮಾಡಿದ್ದಾರೆ.

ಪದಕ ವಿಜೇತರು:

ಆಳ್ವಾಸ್ ಕ್ರೀಡಾಪಟುಗಳು ಈ ಕೆಳಗಿನ ವಿಭಾಗಗಳಲ್ಲಿ ಪದಕಗಳನ್ನು ಗೆದ್ದರು: ನಾಗೇಂದ್ರ: ಡಿಸ್ಕಸ್ ಥ್ರೋನಲ್ಲಿ ಚಿನ್ನ, ಅಮನ್: ಪೋಲ್ ವಾಲ್ಟ್‌ನಲ್ಲಿ ಚಿನ್ನ., ಚಮನ್: ಡೆಕಥ್ಲಾನ್‌ನಲ್ಲಿ ಚಿನ್ನ,  ಪ್ರದೀಪ್ ಕುಮಾರ್: ಟ್ರಿಪಲ್ ಜಂಪ್‌ನಲ್ಲಿ ಕಂಚು ಪಡೆದರು.ಬಆಳ್ವಾಸ್ ತಂಡವು ಸಮಗ್ರ ಚಾಂಪಿಯನ್‌ಶಿಪ್ ಪಟ್ಟವನ್ನು ಅಲಂಕರಿಸಿತು.


ಮಹಿಳಾ ವಿಭಾಗದಲ್ಲಿ ನಾಲ್ಕನೇ ಸ್ಥಾನ:

ಇದೇ ಕ್ರೀಡಾಕೂಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆಯುವ ಮೂಲಕ ನಾಲ್ಕನೇ ಸ್ಥಾನ ಗಳಿಸಿತು. ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಮಂಗಳೂರು ವಿ.ವಿ. ಒಟ್ಟು 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿ ಒಟ್ಟು 7 ಪದಕಗಳನ್ನು ಗಳಿಸಿತು.


ಆಳ್ವಾಸ್ ಕೊಡುಗೆ:

ಮಂಗಳೂರು ವಿಶ್ವವಿದ್ಯಾಲಯದ ತಂಡದಲ್ಲಿ ಒಟ್ಟು 43 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 39 ವಿದ್ಯಾರ್ಥಿಗಳು ಆಳ್ವಾಸ್‌ನ ಕ್ರೀಡಾಪಟುಗಳಾಗಿದ್ದಾರೆ. ವಿವಿಯು ಪಡೆದ 7 ಪದಕಗಳಲ್ಲಿ ಒಂದು ಬೆಳ್ಳಿ ಪದಕವನ್ನು ಹೊರತುಪಡಿಸಿ, ಉಳಿದ 6 ಪದಕಗಳು ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಯಾಗಿದೆ. ದಕ್ಷಿಣ ಕನ್ನಡದ ಊರು ಪ್ರಥಮ ದರ್ಜೆ ಕಾಲೇಜಿನ ಶ್ರೀ ದೇವಿ ಅವರು ಒಂದು ಬೆಳ್ಳಿ ಪದಕವನ್ನು ಪಡೆದಿದ್ದರು.

ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.