ಒಂದು ಕೋಟಿ ರೂ. ವೆಚ್ಚದ ಅಶ್ವತ್ಥಪುರ - ಸಂಪಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

BIDIRE NEWS

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಅಶ್ವತ್ಥಪುರ - ಸಂಪಿಗೆ ಜಿಲ್ಲಾ ಮುಖ್ಯ ರಸ್ತೆಯ ಕಾಮಗಾರಿಗೆ ಶನಿವಾರ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಶಾಸಕರು ಮಾತನಾಡಿ, ಈ ರಸ್ತೆಯ ಅಭಿವೃದ್ಧಿಯಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಪ್ರಯಾಣಕ್ಕೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ತೆಂಕಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಸದಸ್ಯರಾದ ಹರಿಪ್ರಸಾದ್ ಶೆಟ್ಟಿ, ದಿನೇಶ್ ಭಟ್, ರುಕ್ಮಿಣಿ, ಸಮಿತಾ, ನಿಶಾ, ನಮಿತಾ, ಲಕ್ಷ್ಮೀ, ಗೀತಾ, ಮಹೇಶ್, ವಿದ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಅಲ್ಲದೆ, ಬಿಜೆಪಿ ಪುತ್ತಿಗೆ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶ್ಯಾಮ್ ಭಟ್, ಪ್ರಮುಖರಾದ ರಾಘವೇಂದ್ರ ರಾವ್ ಮತ್ತು ಹಿರಿಯರಾದ ಅರುಣ್ ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಸ್ಥಳೀಯ ಮುಖಂಡರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.