ಕಲ್ಲಬೆಟ್ಟಿನಲ್ಲಿ ಯುವಕನ ಆತ್ಮಹತ್ಯೆ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಶವ

BIDIRE NEWS

ಮೂಡುಬಿದಿರೆ: ಪುರಸಭೆ ಕಲ್ಲಬೆಟ್ಟು ಗ್ರಾಮದ ನೀರಾಲ್ಕೆ ನಿವಾಸಿಯಾದ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಸೆಂಬರ್ 6ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮೃತನನ್ನು ಸಂಜಯ್ ಯಾನೆ ಮುನ್ನಾ (26) ಎಂದು ಗುರುತಿಸಲಾಗಿದೆ. ಇವರು ಕೃಷ್ಣಪ್ಪ ಅವರ ಪುತ್ರರಾಗಿದ್ದು, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ವಿವರಗಳ ಪ್ರಕಾರ, ಸಂಜಯ್ ಅವರು ತಮ್ಮ ಮನೆಯ ಸಮೀಪದ ಹಾಡಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಈ ವಿಚಾರವು ಸ್ಥಳೀಯರ ಗಮನಕ್ಕೆ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.