ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಡುಬಿದಿರೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಗುರುಮೂರ್ತಿಯವರು, ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬವನ್ನು ಗಿಡ ನೆಡುವ ಮೂಲಕ ಆಚರಿಸಬೇಕು ಎಂದು ಅಭಿಪ್ರಾಯಪಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಕುರಿತು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸ್ಕೈ ಪೇಂಟ್ಸ್ ಸಂಸ್ಥೆಯ ಮಾಲೀಕ ಶೈಲೇಂದ್ರ ಕುಮಾರ್ ಜೈನ್ ಅವರು ಶಾಲೆಯ ಶಿಸ್ತು, ಪರಿಸರ ಮತ್ತು ಸಂಸ್ಕೃತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಯಂ ನಂಬಿಕೆ ಮತ್ತು ಅವಕಾಶಗಳ ಸದುಪಯೋಗವು ಸಾಧನೆಗೆ ದಾರಿ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅಧ್ಯಕ್ಷತೆವಹಿಸಿದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಸಿಕೊಳ್ಳಬೇಕು ಎಂದು ಹೇಳಿ, ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಗುರುಮೂರ್ತಿ ಮತ್ತು ಶೈಲೇಂದ್ರ ಕುಮಾರ್ ಜೈನ್ ಅವರನ್ನು ಸಂಸ್ಥೆಯ ಸನ್ಮಾನಿಸಲಾಯಿತು
ವಿವಿಧ ಸಾಂಸ್ಕೃತಿಕ ಮತ್ತು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು.
ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್, ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲಶ್ರೀ ಪ್ರಸಾದ್ ಉಪಸ್ಥಿತರಿದ್ದರು. ಶಿಕ್ಷಕಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.

