ಮೂಡುಬಿದಿರೆ: 400 ಕೆ.ವಿ. ವಿದ್ಯುತ್ ಪ್ರಸರಣ ಲೈನ್ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸ್ಟೆರ್ ಲೈಟ್ ವಿದ್ಯುತ್ ಕಂಪನಿಯಿಂದ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಸ್ಥಳೀಯ ಶಾಸಕರು ಕೆಡಿಪಿ ಮತ್ತು ಅಕ್ರಮ ಸಕ್ರಮ (94C/94CC) ಸಭೆಗಳನ್ನು ನಡೆಸದೇ ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿರುವುದನ್ನು ಆರೋಪಿಸಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯು ಡಿಸೆಂಬರ್ 5ರಂದು ಬೆಳಿಗ್ಗೆ 10:30ಕ್ಕೆ ತಾಲೂಕು ಕಚೇರಿಯ ಮುಂಭಾಗದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ಕಂಪನಿಯು ವಿದ್ಯುತ್ ಲೈನ್ ಕಾಮಗಾರಿಯ ಸಂದರ್ಭದಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ, ಬೆಳೆ ಮತ್ತು ಭೂಮಿ ನಷ್ಟಕ್ಕೆ ಸರಿಯಾದ ಪರಿಹಾರ ನೀಡದಿರುವ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕು. ಮೂಡುಬಿದಿರೆಯ ಬಿಜೆಪಿ ಶಾಸಕರು ತಾಲೂಕು ಕೆಡಿಪಿ ಸಭೆ ಹಾಗೂ ಬಡವರಿಗೆ ಅನುಕೂಲವಾಗುವ ಅಕ್ರಮ ಸಕ್ರಮ ಸಭೆಗಳನ್ನು ನಡೆಸಲು ವಿಫಲರಾಗಿದ್ದು, ಇದರಿಂದ ರೈತರು ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು.
ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಂಧುಗಳು, ಸಾರ್ವಜನಿಕರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

