ಪುತ್ತಿಗೆಯ ಸಂಪಿಗೆಯಲ್ಲಿ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು: ಮಹಿಳೆಗೆ ಗಾಯ

BIDIRE NEWS

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮವಾಗಿ ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿದೆ. ಮನೆ ಗೋಡೆ ಬಿರುಕು ಬಿಟ್ಟಿದೆ.


 ಕಟೀಲು ದೇವಸ್ಥಾನದಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ನೇರವಾಗಿ ಸ್ಥಳೀಯರಾದ ಚಂದ್ರ ನಾಯ್ಕ್ ಅವರಿಗೆ ಸೇರಿದ ಮನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮನೆಯ ಕೆಲವು ಭಾಗಗಳಿಗೆ ಹಾನಿಯಾಗಿದ್ದು, ಕಾರು ಸಹ ಜಖಂಗೊಂಡಿದೆ.

ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಮಹಿಳೆಯ ಮುಖ ಮತ್ತು ಹಲ್ಲಿನ ಭಾಗಕ್ಕೆ ಪೆಟ್ಟಾಗಿದ್ದು, ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು.