ಮೂಡುಬಿದಿರೆ: ಇಲ್ಲಿನ ಜ್ಯೋತಿನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ತಂಡ್ರಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಭೀಷ್ ಪೂಜಾರಿ ಅವರು ಅಭಿನಯ ಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈ ಸಾಧನೆಗಾಗಿ ಅಭೀಷ್ ಅವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ

