ಮೂಡುಬಿದಿರೆ: ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ ವತಿಯಿಂದ ಮೂಡುಬಿದಿರೆ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಭಾರತ ಸಂವಿಧಾನದ ಪೀಠಿಕೆಯ ಭಾವಚಿತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಪೀಠಿಕೆಯ ಮಹತ್ವವನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಲು ಮತ್ತು ಕಚೇರಿಗಳಲ್ಲಿ ಸಂವಿಧಾನದ ಆಶಯಗಳನ್ನು ನಿತ್ಯ ನೆನಪಿಸಲು ಈ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ, ಮಹಿಳಾ ಘಟಕದ ಸಹ ಕಾರ್ಯದರ್ಶಿಗಳಾದ ಲೀಲಾ ಮತ್ತು ಪದ್ಮ, ಹಾಗೂ ಸದಸ್ಯೆ ವಿನಂತಿ ಉಪಸ್ಥಿತರಿದ್ದರು.



