ಮೂಡುಬಿದಿರೆ: "ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದರೆ ಅದಕ್ಕೆ ಉತ್ತಮ ವಾತಾವರಣ ಬೇಕು. ಎಕ್ಸಲೆಂಟ್ ವಿದ್ಯಾಸಂಸ್ಥೆಯು ಅಂತಹ ಅತ್ಯುತ್ತಮ ವ್ಯಾಸಂಗದ ವಾತಾವರಣವನ್ನು ನೀಡುತ್ತಿದೆ. ಕಲಿಯುತ್ತಿರುವ ವಿದ್ಯಾರ್ಥಿಗಳು ಜೀವನದ ಉತ್ತುಂಗ ಶಿಖರ ತಲುಪಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ ಎಂದು ಬೆಂಗಳೂರು ಡಿವೈಎಸ್‌ಪಿಪ್ರಮೋದ್ ಕುಮಾರ್ ಬಿ. ಹೇಳಿದರು.
ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ್ ಜಿ.ಎಸ್. ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು ಹಾಗೂ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು. ಕನಸುಗಳನ್ನು ಬೆನ್ನಟ್ಟಿದಾಗ ಸಾಧನೆ ಸಾಧ್ಯ. ಸತತ ಅಭ್ಯಾಸ, ಪರಿಶ್ರಮ ಜೊತೆಯಲ್ಲಿದ್ದರೆ ಯಶಸ್ಸಿನ ಸಮೀಪಕ್ಕೆ ತಲುಪಬಹುದು ಎಂದರು.
ಎಕ್ಸಲೆAಟ್ ಮತ್ತೊಂದು `ಸಿದ್ಧವನ ಗುರುಕುಲ': ರಕ್ಷಿತ್ ಜೈನ್
ಉಡುಪಿ ಜಿಲ್ಲೆಯ ಸಾಮಾಜಿಕ ಸೇವಾ ಅಧಿಕಾರಿ ರಕ್ಷಿತ್ ಜೈನ್ ಮಾತನಾಡಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಮತ್ತೊಂದು `ಸಿದ್ಧವನ ಗುರುಕುಲ' ಎಂದರು.
ಸಂಸ್ಥೆಯ ಹಳೆಯ ವಿದ್ಯಾರ್ಥಿ, 2021-22ನೇ ಸಾಲಿನಲ್ಲಿ ಅತ್ಯುತ್ತಮ ಅಂಕಗಳಿಸಿ ನೀಟ್ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆಗೈದು ಪ್ರಸ್ತುತ ಬೆಂಗಳೂರಿನ ಪ್ರತಿಷ್ಠಿತ ಬಿಎಂಸಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಶಶಿಭೂಷಣ್ ಕಾಲೇಜಿನ ಅನುಭವಗಳನ್ನು ಹಂಚಿಕೊAಡರು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆವಹಿಸಿ, ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಸಂತೋಷದ ಹಬ್ಬವಾಗಿದೆ. ಇಲ್ಲಿ ಸಿಗುವ ಶಿಕ್ಷಣದಿಂದ ನಮ್ಮ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಸತತ ಅಭ್ಯಾಸ, ಪರಿಶ್ರಮದ ಜೊತೆಗೆ ಗುರುಗಳಿಗೆ, ಹೆತ್ತವರಿಗೆ ಪ್ರತಿದಿನ ನಮಿಸುತ್ತಾ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸನ್ನು ಸುಲಭವಾಗಿ ಸಂಪಾದಿಸಿಕೊಳ್ಳಬಹುದು ಎಂದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಸಾನಿಧ್ಯ ರಾವ್ ಸೇರಿ ಅಗ್ರ ಹತ್ತು ರ‍್ಯಾಂಕ್ ಪಡೆದ 14 ಮಂದಿ ವಿದ್ಯಾರ್ಥಿಗಳು ಮತ್ತು 600ಕ್ಕೂ ಅಧಿಕ ಅಂಕ ಪಡೆದ 45 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರದವರು ನೀಡುವ `ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ' ಪುರಸ್ಕೃತ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಭಾಸ್ಕರ್ ನೆಲಾವಿ ಅವರನ್ನು ಗೌರವಿಸಲಾಯಿತು.
ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ವಾರ್ಷಿಕ ವರದಿ ವಾಚಿಸಿದರು. ಉಪ ಮುಖ್ಯ ಶಿಕ್ಷಕ ಜಯಶೀಲ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ಗೌಡ ವಂದಿಸಿದರು. ಶಿಕ್ಷಕಿ ವೆನೆಸ್ಸಾ ನೊರೊನ್ಹಾ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿಶೇಷ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

