ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯಿಂದ ಜ.26ರಂದು ಗಣರಾಜ್ಯೋತ್ಸವ ಆಚರಣೆ

BIDIRE NEWS

ಮೂಡುಬಿದಿರೆ:ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆ ಸಹಯೋಗದಲ್ಲಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬೆಳಿಗ್ಗೆ 11ರಿಂದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕು ತಹಸೀಲ್ದಾರ್  ಶ್ರೀಧರ್ ಎಸ್. ಮುಂದಲಮನಿ ಉದ್ಘಾಟಿಸಲಿದ್ದಾರೆ.

 ಮೂಡುಬಿದಿರೆ ಪೊಲೀಸ್ ನಿರೀಕ್ಷಕಿ ಪಿ.ಜಿ. ಸಂದೇಶ್, ಅರಣ್ಯ ಇಲಾಖೆಯ ಮುಖ್ಯ ಅಧಿಕಾರಿ ಕಿರಣ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ಇಂದು.ಎಂ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಜೈ ಭೀಮ್ ಯುವ ಸೇನೆಯ ಸಂಸ್ಥಾಪಕರೂ ಸುವರ್ಣ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ವರ್ತೂರು ಮಂಜುನಾಥ್ ವಹಿಸಲಿದ್ದಾರೆ‌ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


slider