ಮೂಡುಬಿದಿರೆ:ವರ್ಷ ಕ್ರಿಯೇಷನ್ಸ್ ಹಾಗೂ ಪ್ರಜಾಸತ್ತಾತ್ಮಕ ದಿನದ ಪ್ರಯುಕ್ತ ಅನ್ನದಾತರೊಂದಿಗೆ ಒಂದು ಹೊತ್ತುಎಂಬ ಆಶಯದೊಂದಿಗೆ ಯಶ ಕರ್ನಾಟಕ ಪತ್ರಿಕೆ ವೇದಿಕೆಯ ವತಿಯಿಂದ ಚಿಂತನ–ಮಂಥನ–ಗೌರವ–ಸನ್ಮಾನ ಕಾರ್ಯಕ್ರಮವನ್ನು ಜ.26ರಂದು ನಗರದ ಸೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಶ ಕರ್ನಾಟಕ ಕನ್ನಡ ವಾರಪತ್ರಿಕೆಯ ಸಂಪಾದಕ ಪದ್ಮನಾಭ ಗಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಉದ್ಘಾಟಿಸಲಿದ್ದಾರೆ.
ಹಿರಿಯ ಪತ್ರಕರ್ತ ಹಾಗೂ ಪ್ರಗತಿಪರ ಕೃಷಿಕರಾದ ರಾಧಾಕೃಷ್ಣ ಹೊಳ್ಳ ಅವರು “ಕೃಷಿಕರ ಮುಂದಿರುವ ಸವಾಲುಗಳು” ವಿಷಯದ ಕುರಿತು ಪ್ರಧಾನ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ. ಹರೀಶ್ ರೈ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಾಗಿ ಪ್ರೆಸ್ ಕ್ಲಬ್ ಮೂಡುಬಿದಿರೆ ಅಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ ಅಧ್ಯಕ್ಷ ನವೀನ್ ಸಾಲ್ಯಾನ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭ ಯಶ ಕರ್ನಾಟಕ ಗೌರವ ಪುರಸ್ಕಾರ–2026ನ್ನು ಎಂ.ಸಿ.ಎಸ್ ಬ್ಯಾಂಕ್ ಮೂಡುಬಿದಿರೆಯ ವಿಶೇಷ ಕಾರ್ಯನಿರ್ವಹಣಾಧಿಕಾರಿ ಶ್ರೀ ಚಂದ್ರಶೇಖರ್ ಎಂ. ಅವರಿಗೆ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮವು ಜನವರಿ 26ರಂದು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದ್ದು, ವರ್ಷ ಕ್ರಿಯೇಷನ್ಸ್ ಭಾರತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಕೆ. ಆದೂರು ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಕಾಸ – ಸಮಾನ ಮನಸ್ಕ ಮಾಧ್ಯಮ ವೇದಿಕೆ, ಬೆಂಗಳೂರು ಸಹಯೋಗ ನೀಡಿದೆ.
ಸಾರ್ವಜನಿಕರಿಗೆ ಕಾರ್ಯಕ್ರಮಕ್ಕೆ ಆದರದ ಸ್ವಾಗತವನ್ನು ಆಯೋಜಕರು ಕೋರಿದ್ದಾರೆ.

