ಮೂಡುಬಿದಿರೆ ಆಡಳಿತಸೌಧದಲ್ಲಿ ಗಣರಾಜ್ಯೋತ್ಸವ: ರೂ.77 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ‌ ಶೀಘ್ರ ಪೂರ್ಣ: ಶಾಸಕ ಕೋಟ್ಯಾನ್

BIDIRE NEWS

ಮೂಡುಬಿದಿರೆ: ತಾಲೂಕಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ರೂ.77 ಕೋಟಿ ವೆಚ್ಚದ ಕುಡಿಯುವ ನೀರಿನ ಮಹತ್ವಾಕಾಂಕ್ಷಿ ಯೋಜನೆ ಭರದಿಂದ ಸಾಗುತ್ತಿದೆ. ಮುಂದಿನ ನಾಲ್ಕು–ಐದು ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ಡ್ರೈನೇಜ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಂದು ಎಕರೆ ಜಾಗ ಗುರುತಿಸಲಾಗಿದ್ದು, ರೂ.4.99 ಕೋಟಿ ಅನುದಾನದ ಯೋಜನೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.




ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ತಾಲೂಕು ಆಡಳಿತಸೌಧದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ಗೌರವ ರಕ್ಷೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಸರ್ಕಾರಿ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಪೊಲೀಸ್ ಇಲಾಖೆಯ ಎಎಸ್‌ಐ ರಾಜೇಶ್ ಎ., ಅರಣ್ಯ ಇಲಾಖೆಯ ಉಪ ವಲಯಾರಣ್ಯಾಧಿಕಾರಿ ರಾಘವೇಂದ್ರ ಶೆಟ್ಟಿ, ಮೆಸ್ಕಾಂ ಇಲಾಖೆಯ ಭೀಮಪ್ಪ ವೈ. ಹದ್ದನ್ನವರ್, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಶಾಂತಮ್ಮ, ಬೆಳುವಾಯಿ ಮುಖ್ಯ ಪಶುವೈದ್ಯಾಧಿಕಾರಿ ಗುರುರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಪುರಸಭೆಯ ವಾಹನ ಚಾಲಕ ದಾಮೋದರ್, ಕೃಷಿ ಇಲಾಖೆಯ ಉಪ ನಿರ್ದೇಶಕಿ ವೀಣಾ ಕೆ.ಆರ್. ಹಾಗೂ ಪೆಂಚಾರು ಸರ್ಕಾರಿ ಶಾಲೆಯ ಸಹ ಶಿಕ್ಷಕಿ ಶ್ರೀವಾಣಿ ಅವರನ್ನು ಗೌರವಿಸಲಾಯಿತು.

ಗ್ಯಾರಂಟಿ ಅನುಷ್ಠಾನ ಯೋಜನೆಯ ಮೂಡುಬಿದಿರೆ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕರ್ನಾಟಕ ಕನ್ನಡ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ., ವಲಯಾರಣ್ಯಾಧಿಕಾರಿ ಕಿರಣ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಹಾಗೂ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾಡಗೀತೆಗೆ ಮೆರಗು

ಜೈನ್ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತಗೀತೆ ಹಾಡಿ ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದರು. ಉಪ ತಹಸೀಲ್ದಾರ್ ರಾಮ ಕೆ. ಕಾರ್ಯಕ್ರಮ ನಿರೂಪಿಸಿದರು.


slider