ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಜೈನಪೇಟೆ ಸಮೀಪದ ಕಲ್ಸಂಕ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕರ ನಿಧಿಯಿಂದ ರೂ.30 ಲಕ್ಷ ಅನುದಾನ ಮಂಜೂರಾಗಿದೆ. ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ವಾರ್ಡ್ ಸದಸ್ಯೆ ಶ್ವೇತಾ ಪ್ರವೀಣ್, ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಇಂಜಿನಿಯರ್ ರಾಕೇಶ್, ಮೂಡು ಮಾಜಿ ಅಧ್ಯಕ್ಷ ಮೇಘನಾಥ್ ಶೆಟ್ಟಿ, ಸ್ಥಳೀಯರಾದ ಸುವಿಧೀಂದ್ರ, ಪ್ರವೀಣ್ ಇಂದ್ರ ಮತ್ತಿತರರಿದ್ದರು.

