ಮೂಡುಬಿದಿರೆ: ತಾಲೂಕಿನ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಯಶ್ರೀ ಅಶೋಕ್ ಅವರ ಹರಕೆ ಸೇವಾರೂಪದಲ್ಲಿ ಅಂಗವಾಗಿ ರಂಗಪೂಜೆ ಶ್ರದ್ಧಾಭಕ್ತಿಯಿಂದ ಜರಗಿತು.
ದೇವಾಲಯದ ಪ್ರಧಾನ ಅರ್ಚಕ ಐ. ರಾಘವೇಂದ್ರ ಆಸ್ರಣ್ಣ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ರಂಗಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿ ನಡೆಯಿತು.
ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ವರದಿ: ನಿಶಾ ಇರುವೈಲು

