ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಪ್ರಸಿದ್ಧ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಅಬ್ಬಕ್ಕ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (KRMSS) ಮಂಗಳೂರು ವಿಭಾಗ ಮತ್ತು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ’ ಕಾರ್ಯಕ್ರಮದ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಅವರು ತೋರುತ್ತಿರುವ ಗಮನಾರ್ಹ ಸಾಧನೆಯನ್ನು ಗುರುತಿಸಿ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

