ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಕಂಬಳದ ಪ್ರಮುಖ ವೈಶಿಷ್ಟ್ಯವೆಂದರೆ ಕಂಬಳಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಉಚಿತವಾಗಿ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ತಿಳಿಸಿದ್ದಾರೆ.
ಕಂಬಳದಲ್ಲಿ ಭಾಗವಹಿಸುವ ಕೋಣಗಳ ಮಾಲೀಕರು, ಕೋಣ ಓಡಿಸುವವರು ಹಾಗೂ ಕಂಬಳ ವೀಕ್ಷಣೆಗೆ ಬರುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಊಟ, ಸಂಜೆ ಗಂಜಿ ಊಟ, ಚಹಾ–ಕಾಫಿ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಿಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆ ಇರುತ್ತದೆ.
ಇದೇ ವೇಳೆ ವಿಐಪಿ ಅತಿಥಿಗಳಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಹಾಗೂ ತಿಂಡಿ–ಉಪಹಾರ ವ್ಯವಸ್ಥೆಯನ್ನೂ ಮಾಡಲಾಗಿದೆ.
ಕಂಬಳಕ್ಕೆ ಬಂದ ಯಾರೂ ಹಸಿವಿನಿಂದ ಮರಳಬಾರದು ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದ್ದು, ಇದು ಕೋಟಿ ಚೆನ್ನಯ ಕಂಬಳದ ಆತಿಥ್ಯ ಪರಂಪರೆಯ ಪ್ರತೀಕವಾಗಿದೆ ಎಂದು ತಿಳಿಸಿದ್ದಾರೆ.

