ಮೂಡಬಿದಿರೆ: ಈಗಾಗಲೇ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಪ್ರದೇಶಗಳನ್ನು ಮೂಡಬಿದಿರೆ ನಗರ ಯೋಜನಾ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲಾಗಿದ್ದು, ಅತಿಹೆಚ್ಚು ತೆರಿಗೆ ಸಂಗ್ರಹಣೆ ನಡೆಯುತ್ತಿರುವ ಪುತ್ತಿಗೆ ಗ್ರಾಮ ಪಂಚಾಯತನ್ನು ಮೂಡಬಿದಿರೆ ಪುರಸಭೆಗೆ ಸೇರಿಸುವ ವಿಚಾರದಲ್ಲಿ ಗೊಂದಲ ಉಂಟಾಗಿದೆ.
ಇದಲ್ಲದೆ ಈಗಾಗಲೇ 9/11 ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ರಾಜೇಶ್ ಕಡಲಕೆರೆಯವರು ಪುತ್ತಿಗೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿಯವರು ಭರವಸೆ ನೀಡಿದರು.

