ಮೂಡುಬಿದಿರೆ:ಕಳೆದ 11 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸ್ವಂತ ಕೇಂದ್ರ ಕಚೇರಿ ಗುರುವಾರ ಉದ್ಘಾಟನೆಗೊಂಡಿತು.
ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಕಚೇರಿಯನ್ನು ಉದ್ಘಾಟಿಸಿದರು.
ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, 12ನೇ ವರ್ಷಕ್ಕೆ ಕಾಲಿಟ್ಟಿರುವ ಸಂಘವು 12 ಕೋಟಿ ರೂ.ಗಳ ದುಡಿಯುವ ಬಂಡವಾಳವನ್ನು ಹೊಂದಿರುವುದು ಸಂತಸದ ವಿಚಾರ. ಅನಾರೋಗ್ಯ, ವಿದ್ಯಾಭ್ಯಾಸ, ಮನೆ ನಿರ್ಮಾಣ, ಶೌಚಾಲಯ ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡುತ್ತಿರುವ ಸಂಘದ ಕಾರ್ಯ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇತರ ಪ್ರದೇಶಗಳಲ್ಲೂ ಶಾಖೆಗಳು ಆರಂಭವಾಗಲಿ ಎಂದು ಹಾರೈಸಿದರು.
ದೀಪ ಬೆಳಗಿ ಆಶೀರ್ವಚನ ನೀಡಿದ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ದಿವ್ಯಾಂಗರು, ಸೈನಿಕರು ಹಾಗೂ ಹಿರಿಯ ನಾಗರಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ಮೂಲಕ ಸಂಘವು ತನ್ನ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಲಿ ಎಂದು ನುಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಮಾತನಾಡಿ, ಸಾರ್ವಜನಿಕ ಉಪಯೋಗಕ್ಕೆ ಸಹಕಾರಿ ಹಣವನ್ನು ಸಮರ್ಪಕವಾಗಿ ಬಳಸುತ್ತಿರುವ ಪಂಚಶಕ್ತಿ ಸಂಘವು ಶೇ.12 ಶೇಕಡಾ ಡಿವಿಡೆಂಡ್ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಚೌಟರ ಅರಮನೆಯ ಕುಲದೀಪ್ ಎಂ., ಉದ್ಯಮಿ ಶ್ರೀಪತಿ ಭಟ್, ಅಮರನಾಥ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಡಾ. ಅಮರಶ್ರೀ ಶೆಟ್ಟಿ . ಉದ್ಯಮಿ ಮೇಘನಾಥ ಶೆಟ್ಟಿ, ಅಬುಲಾಲ್ ಪುತ್ತಿಗೆ, ಅಶ್ವಿನಿ ಜೆ. ಪಿರೇರಾ, ವೈಬ್ರೆಂಟ್ ಕಾಲೇಜು ಟ್ರಸ್ಟಿ ಶರತ್ ಗೋರೆ ಮತ್ತಿತರರಿದ್ದರು.
ಸಂಘದ ಅಧ್ಯಕ್ಷ ರಂಜಿತ್ ಪೂಜಾರಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ರಾಜಶೇಖರ ಮದ್ಯಸ್ಥ, ನಿರ್ದೇಶಕರಾದ ಸುರೇಶ್ ಪೂಜಾರಿ, ರವೀಂದ್ರ ಕರ್ಕೇರ, ರಮೇಶ್ ಶೆಟ್ಟಿ, ಗೋಪಾಲ್ ಶೆಟ್ಟಿಗಾರ್, ರಾಜೇಂದ್ರ ಬಿ, ಶರತ್ ಜೆ ಶೆಟ್ಟಿ, ಉಷಾ ಭಂಡಾರಿ, ರತ್ನಾಕರ ಪೂಜಾರಿ, ನಾಗೇಶ್ ನಾಯ್ಕ, ಮೀನಾಕ್ಷಿ ಅಂಚನ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ರಾಯಿ ರಾಜಕುಮಾರ್





