ಅಖಿಲ ಭಾರತ ಮಹಾಮುಷ್ಕರ: ಮೂಡುಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ

BIDIRE NEWS
ಮೂಡುಬಿದಿರೆ: ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಮೂಡುಬಿದಿರೆಯಿಂದ ಪಾದಯಾತ್ರೆ ನಡೆಸಲಾಯಿತು.

ಮೂಡುಬಿದಿರೆ ಬಸ್ ನಿಲ್ದಾಣದಿಂದ ಆರಂಭವಾದ ಪಾದಯಾತ್ರೆಯಲ್ಲಿ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ವಸಂತ ಆಚಾರಿ, ವಿದೇಶಿ ಮೂಲದ ಉದ್ಯಮಗಳಿಗೆ ಭಾರತದ ನೆಲವನ್ನು ಒಪ್ಪಿಸುವ ನೀತಿಯನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದರು. ವಿಮಾ ಕ್ಷೇತ್ರದಲ್ಲಿ ದೇಶೀಯ ಕಂಪನಿಗಳಿಗೆ ಹೆಚ್ಚಿನ ಅವಕಾಶ ನೀಡಬೇಕು. ಜೊತೆಗೆ ದೇಶದ ಜನಸಾಮಾನ್ಯರು ಹಾಗೂ ದುಡಿಯುವ ವರ್ಗಕ್ಕೆ ಉದ್ಯೋಗ ಮತ್ತು ಭದ್ರತೆ ಒದಗಿಸುವಂತ ನೀತಿಗಳನ್ನು ರೂಪಿಸಬೇಕೆಂದು ಸರ್ಕಾರಗಳನ್ನು ಒತ್ತಾಯಿಸಿದರು.
ಪಾದಯಾತ್ರೆಯಲ್ಲಿ ಯಾದವ ಶೆಟ್ಟಿ, ರಾಧಾ, ಗಿರಿಜಾ, ನೋಣಯ್ಯ ಗೌಡ, ರಮಣಿ ಸೇರಿದಂತೆ ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.
slider