ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ತಂಡಗಳು ಚಾಂಪಿಯನ್, ರನ್ನರ್‌ಅಪ್

BIDIRE NEWS

ಮೂಡುಬಿದಿರೆ: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ನಲ್ಲಿ ಆಳ್ವಾಸ್ ತಂಡಗಳು ವಿನ್ರ‍್ಸ್ ಹಾಗೂ ರನ್ರ‍್ಸ್ ಪ್ರಶಸ್ತಿಗಳನ್ನು ಪಡೆಯಿತು. 

ಆಳ್ವಾಸ್ ಬಾಲಕರ ವಿಭಾಗದಲ್ಲಿ 24 ಹಾಗೂ ಬಾಲಕಿಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಎರಡು ಬಾಲಕರ ಹಾಗೂ ಎರಡು ಬಾಲಕಿಯರ ತಂಡಗಳು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು. ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕರ ಮತ್ತು ಬಾಲಕಿಯರ ಎ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರೆ, ಆಳ್ವಾಸ್ ಬಿ ತಂಡಗಳು ರನ್ನರ್ಸ್ ಅಪ್ ಪ್ರಶಸ್ತಿಗೆ ಭಾಜನವಾಗುವ ಮೂಲಕ ಪ್ರಾಬಲ್ಯ ಮೆರೆದವು.

ಬಾಲಕಿಯರ ವಿಭಾಗದಲ್ಲಿ ಫೈನಲ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗಗಳಲ್ಲಿ ಆಳ್ವಾಸ್‌ನ ನಾಲ್ಕು ತಂಡಗಳು ಮುಖಾಮುಖಿಯಾಗಿ ಸ್ಪರ್ಧಿಸಿ, ವಿಜೇತ ಹಾಗೂ ರನ್ನರ್ಸ್ ಅಪ್ ಎರಡೂ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡವು.

ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

slider