MOODUBIDIRE
Bidire News

2026-10-30

2026-10-30

2026-10-15

ಬನ್ನಡ್ಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸಾವು – ಖ್ಯಾತ ಕಂಟೆಂಟ್ ಕ್ರಿಯೇಟರ್ ಗಂಭೀರ ಗಾಯ

ಮೂಡುಬಿದಿರೆ: ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಖ್ಯಾತ ಕಂಟೆಂಟ್ ಕ್ರಿಯೇಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಡುಬಿದಿರೆಯ ರೋಟರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿವಿದ್ಯಾರ್ಥಿ, ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿ. ಅಪಘಾತದ ವೇಳೆ ಮೂಡುಬಿದಿರೆಯ ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಬೈಕ್ ಚಲಾಯಿಸುತ್ತಿದ್ದು, ಶ್ರವಣ್ ಸಹಸವಾರರಾಗಿದ್ದರು.

ಬನ್ನಡ್ಕ ದೈವಸ್ಥಾನ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಮೂಡುಬಿದಿರೆ  ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಿತಿ ಗಂಭೀರವಾಗಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.