MOODUBIDIRE
Bidire News

2026-10-30

2026-10-30

2026-10-15

ಮೂಡುಬಿದಿರೆ: ಬನ್ನಡ್ಕದಲ್ಲಿ ಕಾರು–ಬೈಕ್ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬನ್ನಡ್ಕ ದೈವಸ್ಥಾನ ಸಮೀಪ ಬೈಕ್ ಸವಾರ, ರೀಲ್ಸ್ ಚಿತ್ರೀಕರಣ ಮೂಲಕ ಹೆಸರುವಾಸಿಯಾಗಿರುವ ಸೂರಜ್ ಅಂಚನ್  ಹಾಗೂ ಅವರ ಸಂಬಂಧಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು  ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.