MOODUBIDIRE
Bidire News

2026-10-30

2026-10-30

2026-10-15

ಅ.11ರಿಂದ 20ರವರೆಗೆ ಹೊಸನಾಡು ಕೊಡ್ಯಡ್ಕ ಶ್ರೀ ದೇವಿ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಮೂಡುಬಿದಿರೆ:ಹೊಸನಾಡು ಕೊಡ್ಯಡ್ಕದ ಶ್ರೀ ದೇವಿ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ 2026ರ ಅ.11ರಿಂದ 20ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಹತ್ತು ದಿನಗಳ ಉತ್ಸವದಲ್ಲಿ ಪ್ರತಿದಿನ ಸಾಯಂಕಾಲ 6.30ರಿಂದ ರಂಗಪೂಜೆ ನಡೆಯಲಿದೆ.
ಉತ್ಸವದ ಅಂಗವಾಗಿ ಅ.18ರಂದು ಬೆಳಗ್ಗೆ 8 ಗಂಟೆಗೆ ಚಂಡಿಕಾಯಾಗ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಅ.19ರಂದು ರಾತ್ರಿ 8 ಗಂಟೆಯಿಂದ ದಾಂಡಿಯಾ ನೃತ್ಯ ಆಯೋಜಿಸಲಾಗಿದೆ.
ಅ.20ರಂದು ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಚಂಡಿಕಾ ಹೋಮ ನೆರವೇರಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.