MOODUBIDIRE
Bidire News

2026-10-30

2026-10-30

2026-10-15

ಕರ್ನಾಟಕ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌: ಆಳ್ವಾಸ್‌ಗೆ 17 ಪದಕ, ಎರಡು ನೂತನ ಕೂಟ ದಾಖಲೆ

ಮೂಡುಬಿದಿರೆ: ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ 2026ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್‌ನ ಕ್ರೀಡಾಪಟುಗಳು 6 ಚಿನ್ನ, 7 ಬೆಳ್ಳಿ ಹಾಗೂ 4 ಕಂಚು ಸೇರಿದಂತೆ ಒಟ್ಟು 17 ಪದಕಗಳನ್ನು ಗೆದ್ದಿದ್ದಾರೆ. ಇದೇ ವೇಳೆ ಸಾಹಿಲ್ 100 ಮೀ. ಓಟದಲ್ಲಿ ಹಾಗೂ ಆರಂಭಮ್ ರಾಜು 60 ಮೀ. ಓಟದಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ.

ತುಮಕೂರಿನ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆ  ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಚಾಂಪಿಯನ್‌ಶಿಪ್ ನಡೆಯಿತು.

ಬಾಲಕರ ವಿಭಾಗದಲ್ಲಿ ನಿತಿನ್ ಎಲ್.ಜಿ. ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದರು. ಆರಂಭಮ್ ರಾಜು 60 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ಸಮರ್ಥ್ ಸಂಜೀವ್ ಕುಮಾರ್ 1000 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದರು. ಸಾಹಿಲ್ 100 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ನೂತನ ಕೂಟ ದಾಖಲೆ ನಿರ್ಮಿಸಿದರು. ಅಬ್ದುಲ್ ರಜಕ್ ಶಿಗ್ಗಾನ ಹ್ಯಾಮರ್ ತ್ರೋದಲ್ಲಿ ತೃತೀಯ ಸ್ಥಾನ ಪಡೆದರು. ಧನುಷ್ಚಂದ್ರ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ದರ್ಶನ್ 200 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದರು. ಕೃಷ್ಣ ಜಾವೆಲಿನ್ ಎಸೆತದಲ್ಲಿ ಹಾಗೂ ಪ್ರೀತಮ್ 5 ಕಿ.ಮೀ. ನಡಿಗೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರು.

ಬಾಲಕಿಯರ ವಿಭಾಗದಲ್ಲಿ ನಿರ್ಮಲಾ 400 ಮೀ. ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದರು. ಚರೀಷ್ಮಾ 5000 ಮೀ. ಓಟದಲ್ಲಿ ತೃತೀಯ ಹಾಗೂ 3000 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದರು. ಚಸ್ಮಿತಾ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದರು. ಬಾನವಿ ಪಿ.ಎಸ್. 200 ಮೀ. ಓಟದಲ್ಲಿ ದ್ವಿತೀಯ ಹಾಗೂ 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದರು. ಪ್ರೇಕ್ಷಿತಾ ಜಾವೆಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದರೆ, ಪ್ರಿಯಾಂಕ 1000 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದರು. ಭಗೀರಥಿ 3 ಕಿ.ಮೀ. ನಡಿಗೆಯಲ್ಲಿ ದ್ವಿತೀಯ ಸ್ಥಾನ ಪಡೆದರು.

ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.