MOODUBIDIRE
Bidire News

2026-10-30

2026-10-30

2026-10-15

ರಾಷ್ಟ್ರೀಯ ರಕ್ಷಣಾ ಪಡೆ ಸೇರ್ಪಡೆ ಪರೀಕ್ಷೆ: ಕ್ರಿಯೇಟಿವ್ ಕಾಲೇಜಿನ 9 ಮಂದಿ ತೇರ್ಗಡೆ

ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2026ರ ಎನ್‌ಡಿಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕ್ರಿಯೇಟಿವ್ ಕಾಲೇಜಿನ ಒಂಬತ್ತು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

ಕ್ರಿಯೇಟಿವ್ ಕಾಲೇಜಿನ ನಂದನ್ ಆರ್., ರಾಹುಲ್ ಜಿ.ಎನ್., ರಿಷಿ ಎಸ್. ಶೆಟ್ಟಿ, ಸುಮಿತ್ ಎಸ್. ಪ್ರಭು, ಚಿಂತನ್ ಎಂ. ಹೆಗ್ಡೆ, ಪ್ರಣಮ್ ಹೆಚ್.ಡಿ., ಮಿಹಿರ್ ಹೆಗ್ಡೆ, ಯು. ಶ್ರೀಶ ಮೈಪಾಡಿ ಹಾಗೂ ಯಶಸ್ ಆರ್. ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ.

ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರ್ಪಡೆಯಾಗಲು ಬಯಸುವ ಅಭ್ಯರ್ಥಿಗಳಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ರಾಷ್ಟ್ರವ್ಯಾಪಿ ನಡೆದ ಪರೀಕ್ಷೆಯಲ್ಲಿ ಒಟ್ಟು 7,406 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಪೈಕಿ ಕ್ರಿಯೇಟಿವ್ ಕಾಲೇಜಿನ ಒಂಬತ್ತು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಸಂಸ್ಥೆಗೆ ಸಂತಸ ತಂದಿದೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿ ಹಾಗೂ ಪರೀಕ್ಷಾ ಸಂಯೋಜಕ ಸುಮಂತ್ ದಾಮ್ಲೆ ಅಭಿನಂದನೆ ಸಲ್ಲಿಸಿದ್ದಾರೆ.