MOODUBIDIRE
Bidire News

2026-10-30

2026-10-30

2026-10-15

ಪುತ್ತಿಗೆಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ- ಸಂಚಾರ ಅಡಚಣೆ

ಮೂಡುಬಿದಿರೆ: ಗಾಳಿ ಮಳೆಗೆ ಪುತ್ತಿಗೆ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿಬಿದ್ದು, ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು.
ಮರ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಈ ಸಂದರ್ಭದಲ್ಲಿ ಮುರಳೀಧರ ಕೋಟ್ಯಾನ್ ಹಾಗೂ ಸ್ಥಳೀಯ ನಿವಾಸಿಗಳು ಮರವನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯದಲ್ಲಿ ಶ್ರಮಿಸಿದರು. ಬಳಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಯಿತು.