MOODUBIDIRE
Bidire News

2026-10-30

2026-10-30

2026-10-15

ಮರೋಡಿಯಲ್ಲಿ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಸಮಾಪನ: ಯುವಶಕ್ತಿ ಸಮಾಜದ ಅಭಿವೃದ್ಧಿಗೆ ಬಳಕೆಯಾಗಲಿ-ಕ್ಯಾ. ಬ್ರಿಜೇಶ್ ಚೌಟ

ಮೂಡುಬಿದಿರೆ: ಯುವಶಕ್ತಿಯನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಮರೋಡಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ನೊರೋನ್ಹ ತರೀನಾ ರೀಟಾ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಯಾ. ಬ್ರಿಜೇಶ್ ಚೌಟ, ಎನ್‌ಎಸ್‌ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ. ಇಂತಹ ಯುವಶಕ್ತಿಯನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಶಿಬಿರದ ಅವಧಿಯಲ್ಲಿ ವಿದ್ಯಾರ್ಥಿಗಳು ಶ್ರಮದಾನ, ಸ್ವಚ್ಛತಾ ಕಾರ್ಯ, ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ವಿವಿಧ ವ್ಯಕ್ತಿತ್ವ ವಿಕಸನ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳು ಶಿಬಿರದ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಶಿವಪ್ರಸಾದ್ ಅಜಿಲ, ಎಸ್.ಡಿ. ಸಂಪತ್ ಸಾಮ್ರಾಜ್ಯ, ಜಯಂತ್ ಕೋಟ್ಯಾನ್, ಸತೀಶ್ ಕೆ. ಕಾಶಿ ಪಟ್ಟಣ, ಸಂಜಯ ಪ್ರಭು, ದೇವೇಂದ್ರ ಹೆಗ್ಡೆ, ಪದ್ಮರಾಜ್ ಶೆಟ್ಟಿ, ಚಂದ್ರಶೇಖರ್, ಪದ್ಮಪ್ರಸಾದ್ ಆರಿಗ, ಉದಯ ಬಲ್ಲಾಳ, ಜಯರಾಜ ಕಾಭಯ, ಸೂರಜ್ ಬಲ್ಲಾಳ್, ಶಿವನಿಂಗಪ್ಪ ಗಾಣಿಗೇರಾ ಹಾಗೂ ಕಾರ್ಯಕ್ರಮ ಅಧಿಕಾರಿಗಳಾದ ರಾಮಪ್ರಸಾದ್ ಎಂ. ಮತ್ತು ಗೋಪಾಲಕೃಷ್ಣ ಕೆ.ಎಸ್. ಉಪಸ್ಥಿತರಿದ್ದರು.
ರತ್ನಾಕರ ಬುಣ್ಣನ್ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರಾರ್ಥಿ ಲಕ್ಷ್ಮಿ ವಂದಿಸಿದರು.
ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಗ್ರಾಮಸ್ಥರು ಹಾಗೂ ಗಣ್ಯರ ಸಹಕಾರದಿಂದ ಶಿಬಿರವು ಯಶಸ್ವಿಯಾಯಿತು.