MOODUBIDIRE
Bidire News

ಭಂಡಾರಿ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯ, ರಾಜಕೀಯ ಪರಿವರ್ತನೆ ಕುರಿತು ಸಂಶೋಧನೆ: ಪ್ರೊ. ಪ್ರವೀಣ್ ಭಂಡಾರಿಗೆ ಪಿಎಚ್.ಡಿ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ. ಪ್ರವೀಣ್ ಭಂಡಾರಿ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಸಿ. ಎಂ. ರಾಜಪ್ರವೀಣ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭಂಡಾರಿ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಪರಿವರ್ತನೆ ಕುರಿತ ಸಂಶೋಧನೆಗೆ ಈ ಪದವಿ ಲಭಿಸಿದೆ.

ಪ್ರೊ. ಪ್ರವೀಣ್ ಭಂಡಾರಿ ಅವರು ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯಲ್ಲಿ ಉಪನ್ಯಾಸಕ ವೃತ್ತಿ ಆರಂಭಿಸಿ, ಆಳ್ವಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆಗೆ ನೇಮಕಗೊಂಡು, ಭದ್ರಾವತಿಯ ಹೆಬ್ಬೂರು ಮಹಾವಿದ್ಯಾಲಯ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.