MOODUBIDIRE
Bidire News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಕಬಡ್ಡಿ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಮಂಗಳೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಚಾಂಪಿಯನ್ ಆಗಿದೆ.
ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್‌ನಲ್ಲಿ ಆಳ್ವಾಸ್ ತಂಡವು ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ತಂಡವನ್ನು 34–16 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಆರಂಭದಿಂದಲೇ ಉತ್ತಮ ಆಟ ಪ್ರದರ್ಶಿಸಿದ ಆಳ್ವಾಸ್ ತಂಡವು ಸಂಘಟಿತ ದಾಳಿ, ಪರಿಣಾಮಕಾರಿ ರಕ್ಷಣಾ ತಂತ್ರ ಹಾಗೂ ಉತ್ತಮ ತಂಡದ ಹೊಂದಾಣಿಕೆಯ ಮೂಲಕ ಎದುರಾಳಿ ತಂಡದ ವಿರುದ್ಧ ಮೇಲುಗೈ ಸಾಧಿಸಿತು.
ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.